ಮಂಗಳೂರಿಗೆ ಆಗಮಿಸಿದ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ… 

222
firstsuddi

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಗುರುವಾರ ಮಂಗಳೂರಿಗೆ ಆಗಮಿಸಿದರು.ಇಂದು ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ, ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು, ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.