ಮಂಗಳೂರಿನಲ್ಲಿ ಕರ್ಫ್ಯೂ ತೆರವು-ಸಹಜ ಸ್ಥಿತಿಯತ್ತ ಕರಾವಳಿ…

171
firstsuddi

ಮಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಾಳಿದ್ದರಿಂದ ಜಾರಿ ಮಾಡಲಾಗಿದ್ದ ಕರ್ಫ್ಯೂವನ್ನು ತೆರವು ಮಾಡಲಾಗಿದ್ದು, ಈಗಾ ಮಂಗಳೂರು ಸಹಜ ಸ್ಥಿತಿಯತ್ತ ಮರಳಿದ್ದು, ಇದರ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ನಗರದಲ್ಲಿ ಇಂದು ಬೆಳಿಗ್ಗೆ 6ಗಂಟೆಯಿಂದ ಕರ್ಫ್ಯೂ ಮುಕ್ತಾಯವಾಗಿದ್ದು, ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭವಾಗಲಿದೆ. ಕರ್ಫ್ಯೂ ತೆರವು ಮಾಡಿದ್ದರಿಂದ ಜನ ಮಾರುಕಟ್ಟೆಯತ್ತ ಆಗಮಿಸಿ ತಮಗೆ ಬೇಕಾದ ದಿನನಿತ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ.
ಇತ್ತ ಶುಕ್ರವಾರವೇ ಮಂಗಳೂರಿಗೆ ತೆರಳಲು ಸಿದ್ದರಾಗಿದ್ದ ಸಿದ್ದರಾಮಯ್ಯ ಅವರಿಗೆ ಬೇಟಿ ನೀಡಲು ಅವಕಾಶ ಕಲ್ಪಿಸಿರಲಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಗೋಲಿಬಾರ್‍ನಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಬೇಟಿಯಾಗಲಿದ್ದಾರೆ.