ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ; ಬಜರಂಗದಳ ಸಂಘಟನೆಯ ಇಬ್ಬರು ಕಾರ್ಯಕರ್ತರ ಬಂಧನ…

70
firstsuddi

ಮಂಗಳೂರು : ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬಜರಂಗದಳ ಸಂಘಟನೆಯ ಇಬ್ಬರು ಕಾರ್ಯಕರ್ತರ ಬಂಧಿಸಲಾಗಿದೆ.

ಯುವ ಜೋಡಿಗಳಿಬ್ಬರು ನಗರದ ಸೈಂಟ್ ಆಗ್ನೆಸ್ ಕಾಲೇಜು ಬಳಿ ತಿರುಗಾಡುತ್ತಿದ್ದ ವೇಳೆ ಈ ಜೋಡಿಯನ್ನು ಬಜರಂಗದಳ ಕಾರ್ಯಕರ್ತರು ಕದ್ರಿ ಪೊಲೀಸರ ವಶಕ್ಕೆ ನೀಡಿದ್ದರು. ಈ ಸಂದರ್ಭದಲ್ಲಿ ಯುವ ಜೋಡಿಯು ತಮ್ಮ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಪೊಲೀಸರು ಇಬ್ಬರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿದ್ದಾರೆ.