ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ- ಇಬ್ಬರ ಬಂಧನ…

100
firstsuddi

ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಎಸಗಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ವಶಕ್ಕೆ ಪಡೆದಿರುವವರನ್ನು ಅಕ್ಷಯ್ ರಾವ್ ಹಾಗು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಸುಮಾರು 8 ಗಂಟೆಗೆ ನಗರದ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಇಬ್ಬರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಉದ್ಯೋಗಿಗಳನ್ನು ತಡೆದು “ನೀವು ಹಿಂದೂ -ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ?” ಎಂದು ಪ್ರಶ್ನಿಸಿ ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ ಎನ್ನಲಾಗಿದೆ.

ಅಷ್ಟರಲ್ಲಿ ಹೊಯ್ಸಳ ವಾಹನದ ಪೊಲೀಸರು, ಇಬ್ಬರು ಉದ್ಯೋಗಿಗಳನ್ನು ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿರುವುದಾಗಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪಾಂಡೇಶ್ವರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.