ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿ ಮೋದಿ ಧನ್ಯವಾದ.

48
firstsuddi

ನವದೆಹಲಿ: 3,800 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಲು ನಿನ್ನೆ ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿನ ಜನರ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.

ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ’ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಿನ್ನೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ 3,800 ಕೋಟಿ ರೂ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದರು.