ಮಂಗಳೂರಿನ ಪ್ರತಿಷ್ಠಿತ ಹೊಟೇಲ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ ಪತ್ತೆ…

56
firstsuddi

ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಹೊಟೇಲ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಮೃತಪಟ್ಟ ಅಧಿಕಾರಿಯಾಗಿದ್ದಾರೆ. ಇವರು ನಿನ್ನೆ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದು, ಸಂಜೆ 4ರ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.