ಮಂಗಳೂರು : ಇಬ್ಬರು ದರೋಡೆ ಕೋರರ ಬಂಧನ…

172
firstsuddi

ಮಂಗಳೂರು : ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆಯ ಪರ್ಸನ್ನು ದೋಚಿಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಿಹಾರ ಮೂಲದ ರಾಜು ಅಜಯ್ ಕುಮಾರ್ ಮತ್ತು ಸಭೋಧ್ ಎಂದು ಗುರುತಿಸಲಾಗಿದೆ.

ಮಾರ್ಚ್. 23ರಂದು ರಾತ್ರಿ 7.30 ಗಂಟೆ ಸುಮಾರಿಗೆ ದಿವಾ ಎಂಬವರು ಮಂಗಳೂರಿನಲ್ಲಿ ಕೆಲಸ ಮುಗಿಸಿ ಜೋಕಟ್ಟೆಯ ಬಸ್ಸು ನಿಲ್ದಾಣದಲ್ಲಿ ಬಸ್ಸಿನಿಂದ ಇಳಿದು ಮನೆ ಕಡೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿತರಿಬ್ಬರು ದಿವಾಳನ್ನು ಬಿಗಿಯಾಗಿ ಹಿಡಿದು ಆಕೆಯ ಕೈಯಲ್ಲಿದ್ದ ಸುಮಾರು 1000/- ಹಣವಿರುವ ಪರ್ಸ್ ನ್ನು ದೋಚಿಕೊಂಡು ಪರಾರಿಯಾಗಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.