ಮಂಗಳೂರು : ಒಳ ಉಡುಪಿನಲ್ಲಿ 1.10 ಕೋಟಿ ರೂ. ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದ ಮಹಿಳೆಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಮಹಿಳೆಯನ್ನು ಕೇರಳದ ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರಾ ಎಂದು ಗುರುತಿಸಲಾಗಿದೆ. ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಮೀರಾ ಅವರು ಅಕ್ರಮ ಚಿನ್ನ ಮತ್ತು ವಿದೇಶಿ ಸಿಗರೇಟ್ ಗಳನ್ನು ತನ್ನ ಒಳ ಉಡುಪು, ಸ್ಯಾನಿಟರಿ ಪ್ಯಾಡ್, ಸಾಕ್ಸ್ ನಲ್ಲಿ ಬಚ್ಚಿಟ್ಟು ಯಾರಿಗೂ ತಿಳಿಯದ ಹಾಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದಳು. ಕಾರ್ಯಾಚರಣೆಗಿಳಿದ ಕಸ್ಟಮ್ಸ್ ಅಧಿಕಾರಿಗಳು 1.10 ಕೋಟಿ ರೂ. ಮೌಲ್ಯದ 2.41 ಕೆಜಿ ಚಿನ್ನವನ್ನು ವಶಕ್ಕೆ ಪಡೆದು ಸಮೀರಾಳನ್ನು ಬಂಧಿಸಿದ್ದಾರೆ.










