ಮಂಗಳೂರು : ಗೋಲಿಬಾರ್‍ನಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಲು ಆಗಮಿಸಿದ ಕಾಂಗ್ರೆಸ್ ನಿಯೋಗ ಪೊಲೀಸ್ ವಶಕ್ಕೆ…

198
firstsuddi

ಮಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರ ಗುಂಡೇಟಿನಲ್ಲಿ ಮೃತಪಟ್ಟವರ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ ಮಾಡಲು ಮಂಗಳೂರಿಗೆ ಆಗಮಿಸಿದ್ದರು. ಆದರೆ ಪೊಲೀಸರು ಬಜ್ಪೆ ವಿಮಾನ ನಿಲ್ದಾಣದಲ್ಲೇ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನಿಯೋಗ ನಿನ್ನೆ ಪ್ರತಿಭಟನೆ ವೇಳೆ ಪೊಲೀಸರ ಗೋಲಿಬಾರಿನಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಲು ಆಗಮಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಿಮಾನ ನಿಲ್ದಾಣದಿಂದಲೇ ವಾಪಾಸ್ ಕಳುಹಿಸಲು ಮುಂದಾಗಿದ್ದಾರೆ. ಆದರೆ ವಿಮಾನ ನಿಲಾಣದಲ್ಲಿ ಕೆಲ ಕಾಲ ಹೈಡ್ರಾಮವೇ ನಡೆದಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಪೊಲೀಸರ ಮೇಲೆ ಕೂಗಾಡಿದ್ದು, ನೀವು ನಮ್ಮನ್ನು ಬಂಧಿಸಬಾರದು ಎಂದು ಗಲಾಟೆ ಮಾಡಿದ್ದು, ಹೀಗಾಗಿ ಪೊಲೀಸರು ಕಾಂಗ್ರೆಸ್ ನಾಯಕರಾದ ಬಸವರಾಜ ರಾಯರೆಡ್ಡಿ, ಉಗ್ರಪ್ಪ, ಎಂ.ಬಿ.ಪಾಟೀಲ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಸೀತಾರಾಮ್ ಅವರನ್ನು ವಶಕ್ಕೆ ಪಡೆದಿದ್ದಾರೆ.