ಹಳೆಯಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಜಾರಿ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ನಡೆದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಹಾಗೂ ಆತನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳಕ್ಕೆ ತೆರಳಿ ವಾಪಾಸ್ಸು ಬರುವ ವೇಳೆ ಹಠಾತ್ತನೆ ರಸ್ತೆ ಪಕ್ಕದ ನಂದಿನಿ ನದಿಗೆ ಕಾರು ಜಾರಿ ನದಿಯಲ್ಲಿ ಮುಳುಗುತ್ತಿರುವಾಗಲೆ ಅಶ್ರಫ್ ಹಾಗೂ ಅವರ ಸ್ನೇಹಿತ ಕಾರಿನಿಂದ ಹೊರಬಂದು ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ.
ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಾಯದಿಂದ ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲಕ್ಕೆತ್ತಿದರು.










