ಮಂಗಳೂರು : ನಿಯಂತ್ರಣಕ್ಕೆ ಬಾರದ ಪ್ರತಿಭಟನೆ-ನಗರದ ಕೇಂದ್ರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ…

177
firstsuddi

ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನಗರದ ಕೇಂದ್ರ ವ್ಯಾಪ್ತಿಯಲ್ಲಿ ಕಫ್ರ್ಯೂ ಜಾರಿ ಮಾಡಲಾಗಿದೆ. ಪೊಲೀಸರು ಪ್ರತಿಭಟನೆಯನ್ನು ನಿಯಂತ್ರಿಸಲು ಅಶ್ರುವಾಯು ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದರೂ ನಿಯಂತ್ರಣಕ್ಕೆ ಬಾರದ ಕಾರಣ ಮಂಗಳೂರಿನ ಪಾಂಡೇಶ್ವರ, ಹಂಪನಕಟ್ಟೆ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿವರೆಗೂ ಕರ್ಫ್ಯೂ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಆದೇಶ ಹೊರಡಿಸಿದ್ದಾರೆ.