ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ – ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ…

60
firstsuddi

ಮಂಗಳೂರು : ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ನವೆಂಬರ್ 19ರಂದು ಪಡೀಲ್ ಕಡೆಯಿಂದ ಪಂಪ್ ವೆಲ್‍ಗೆ ಬರುತ್ತಿದ್ದ ಆಟೋರಿಕ್ಷಾದಲ್ಲಿ ಆರೋಪಿ ಶಾರೀಕ್ ಕೊಂಡೊಯ್ಯುತ್ತಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡಿದ್ದು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಗೃಹ ಸಚಿವರು ಭೇಟಿ ನೀಡಿ ಹಾನಿಗೊಳಗಾದ ರಿಕ್ಷಾವನ್ನು ವೀಕ್ಷಿಸಿದರು.

ಈ ವೇಳೆ ಶಾಸಕ ಭರತ್ ಶೆಟ್ಟಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಐಜಿಪಿ ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ಅನುಷ್ ಕುಮಾರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಂಬ್ ಸ್ಫೋಟ ಸ್ಥಳ ವೀಕ್ಷಿಸಿದ ಬಳಿಕ ನಗರದ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ತೆರಳಿದ ಗೃಹ ಸಚಿವರು ಘಟನೆಯಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ್ ಹಾಗೂ ಆರೋಪಿ ಶಾರೀಕ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಗೃಹ ಸಚಿವರು ಪುರುಷೋತ್ತಮ ಪೂಜಾರಿಯವರಿಗೆ ವೈಯುಕ್ತಿವಾಗಿ ರೂ. 50000 ಆರ್ಥಿಕ ನೆರವು ನೀಡಿದರು. ಇನ್ನು ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.