ಮಂಗಳೂರು ಬಾಂಬ್ ಸ್ಫೋಟದ ಹೊಣೆ ಹೊತ್ತ ಉಗ್ರ ಸಂಘಟನೆ…

19
firstsuddi

ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಉಗ್ರ ಕೃತ್ಯದ ಹೊಣೆಯನ್ನು ʼಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ʼ ಹೆಸರಿನ ಸಂಘಟನೆಯೊಂದು ಹೊತ್ತುಕೊಂಡಿದೆ.

ನ.23ರಂದು ಪ್ರಕಟಿಸಲಾದ ಅರೆಬಿಕ್ ಭಾಷೆಯಲ್ಲಿರುವ “Majlis Almuqawamat Al’islamia” ಪೋಸ್ಟ್ ಜೊತೆ ಶಾರೀಕ್ ಎರಡು ಹಳೆಯ ಫೋಟೋಗಳನ್ನು ಅಪ್ಲೋಡ್ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ನಮ್ಮ ದಾಳಿ ಕದ್ರಿ ದೇವಸ್ಥಾನ ಆಗಿತ್ತು. ಆದರೆ ಉದ್ದೇಶಿತ ಗುರಿಯನ್ನು ತಲುಪುವ ಮೊದಲೇ ಬಾಂಬ್ ಸ್ಫೋಟಗೊಂಡಿದೆ ಸಂಘಟನೆ ಹೇಳಿಕೊಂಡಿದೆ.

ಅಷ್ಟೇ ಅಲ್ಲದೇ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಹಾಕಲಾಗಿದೆ. ನಿಮ್ಮ ಸಂತೋಷವು ಅಲ್ಪಕಾಲಿಕವಾಗಿರುತ್ತದೆ ಮತ್ತು ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಅನುಭವಿಸುತ್ತೀರಿ ಎಂದು ಹೇಳಿದೆ.

ವೈರಲ್ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಎಡಿಜಿಪಿ ಅಲೋಕ್ ಕುಮಾರ್, ನಾವು ಸಂಘಟನೆ ಮತ್ತು ಪೋಸ್ಟ್ ಕುರಿತ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.