ಮಂಗಳೂರು: ರೂ. 90 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಮಾರಾಟ ಯತ್ನ – ಮೂವರ ಬಂಧನ…

66
firstsuddi

ಮಂಗಳೂರು: ನಗರದ ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿರುತ್ತಾರೆ.

ಬಂಧಿತ ವ್ಯಕ್ತಿಗಳನ್ನು ಉಡುಪಿ ಜಿಲ್ಲೆ ಸಾಲಿಗ್ರಾಮ ಮೂಲದ ಜಯಕರ(29), ಶಿವಮೊಗ್ಗ ಜಿಲ್ಲೆ ಸಾಗರದ ಆದಿತ್ಯ (25), ಹಾವೇರಿ ಜಿಲ್ಲೆ ಲೋಹಿತ್ ಕುಮಾರ್ ಗುರಪ್ಪನವರ್ (39) ಎಂದು ಗುರುತಿಸಲಾಗಿದೆ.

ಬಂಧಿತರಿಂದ 900 ಗ್ರಾಂ ತೂಕದ 90 ಲಕ್ಷ ಬೆಲೆಬಾಳುವ ಅಂಬರ್ ಗ್ರೀಸನ್ನು ವಶಪಡಿಸಿಕೊಳ್ಳಲಾಗಿದೆ.

ಈ ದಾಳಿಯು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ನಡೆಸಿರುತ್ತಾರೆ.