ಮಂಗಳೂರು ಹಿಂಸಾಚಾರ : ಪೊಲೀಸರಿಂದ ಸಿಸಿಟಿವಿ ದೃಶ್ಯಾವಳಿ ಬಿಡುಗಡೆ…

188
firstsuddi

ಮಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಯ ಕುರಿತು ಮಂಗಳೂರು ಪೊಲೀಸರು ಸಿಸಿಟಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದು, ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಲು ಮೊದಲೆ ಸಿದ್ಧತೆ ಮಾಡಲಾಗಿತ್ತು ಎಂಬ ಅನುಮಾನ ಮೂಡಿದೆ. ಮಂಗಳೂರಿನಲ್ಲಿ ಕಲ್ಲು ತೂರಾಟವಾಗಿಲ್ಲ. ಪೊಲೀಸರ ಗುಂಡೇಟಿಗೆ ಬಲಿಯಾದವರು ಅಮಾಯಕರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಬೇಕೆಂದೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂಬ ಹಲವು ಆರೋಪಗಳಿಗೆ ಮಂಗಳೂರು ನಗರ ಪೊಲೀಸರು ಹಿಂಸಾಚಾರಕ್ಕೆ ಸಂಬಂಧಿಸಿದ ಕೆಲವು ವಿಡಿಯೋಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಫೋಟೋಗಳನ್ನು ಬಿಡುಗಡೆ ಮಾಡುವ ಮೂಲಕ ತಕ್ಕ ಉತ್ತರ ನೀಡಿದ್ದಾರೆ.

ವಿಡಿಯೋದಲ್ಲಿ ಕೆಲ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸುತ್ತಿರುವುದು, ಸಿಸಿಟಿವಿಯನ್ನು ದೊಣ್ಣೆಯಿಂದ ಹೊಡೆದು ಪುಡಿ ಮಾಡುತ್ತಿರುವುದು, ಪೊಲೀಸರ ವಾಹನವನ್ನು ತಡೆಗಟ್ಟುತ್ತಿರುವುದು ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿ ಮಾಡುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ದಾಖಲಾಗಿದೆ.