ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಕಾಲೇಜಿನಲ್ಲಿ ಹಿಜಬ್ ವಿವಾದ ಮತ್ತೆ ಭುಗಿಲೆದ್ದಿದೆ. ಮೇ 26ರಂದು ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್‍ಗೆ ಅವಕಾಶ ಇಲ್ಲ ಎಂದು ಕಾಲೇಜು ಮಂಡಳಿ ಆದೇಶ ನೀಡಿದೆ. ಹೀಗಿದ್ದರೂ ಇಂದು 12 ಮಂದಿ ಹಿಜಾಬ್ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದರು.
ನಂತರ ಗ್ರಂಥಾಲಯಕ್ಕೆ ತೆರಳಿದ 12 ಮಂದಿ ಹಿಜಾಬ್ ವಿದ್ಯಾರ್ಥಿನಿಯರನ್ನು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದೇ ಪ್ರಾಂಶುಪಾಲ ಅನುಸೂಯ ರೈ ವಾಪಸ್ ಕಳುಹಿಸಿದ್ದಾರೆ. ಕಾಲೇಜಿನಲ್ಲಿ ಹಿಜಬ್ ಗಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು ನಂತರ ಹೊರಗೆ ತೆರಳಿ ಮನೆಗೆ ಹಿಂದಿರುಗಿದ್ದಾರೆ. ಇಂದು ಡಿಸಿ ಕಚೇರಿಗೆ ಭೇಟಿ ನೀಡಿ ಹಿಜಬ್ ಧರಿಸಿ ಕಾಲೇಜಿಗೆ ತೆರಳಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸುವ ಸಾಧ್ಯತೆ ಇದೆ.










