ಮಂಜಪ್ಪ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡುತ್ತೇನೆ : ಸಿದ್ದರಾಮಯ್ಯ…

176
firstsuddi

ಬೆಂಗಳೂರು : ದಾವಣಗೆರೆಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ತ್ಯಾವಣಗಿಯಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದೆ. ಮಂಜಪ್ಪನವರು ಸಾಮಾಜಿಕ ನ್ಯಾಯ, ಸರ್ವಧರ್ಮ ಸಹಬಾಳ್ವೆ, ಜಾತ್ಯತೀತ ತತ್ವಗಳಲ್ಲಿ ನಂಬಿಕೆಯಿಟ್ಟಿರುವವರು. ಕ್ಷೇತ್ರದ ಮತದಾರರು ಇವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.