ಬೆಂಗಳೂರು: ಮಂಡ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಟರಾಜ್ ಮೃತ ಅಧಿಕಾರಿ. ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ತಮ್ಮ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹೃದಯಾಘಾತವಾಗಿದ್ದ ಹಿನ್ನೆಲೆ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಕ್ಕೆ ಹೋಗಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್ಒ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ. ಇದರಿಂದ ಬೇಸತ್ತು ಡಾ.ನಟರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.










