ಮಂಡ್ಯ : ಭೀಕರ ರಸ್ತೆ ಅಪಘಾತ-8ಮಂದಿ ದುರ್ಮರಣ…

250
firstsuddi

ಮಂಡ್ಯ : ಟಾಟಾ ಸುಮೋ ಮತ್ತು ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎಂಟು ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ರಾಮದೇವನಹಳ್ಳಿ ಗೇಟ್ ಬಳಿ ನಡೆದಿದೆ. ಬಾಕರ್ ಷರೀಫ್(50), ತಾಹೀರ್(30), ನೌಷದ್(45),ಹಸೀನ್ ತಾಜ್(50)ಮೆಹಬೂಬ್ ಜಾನ್(50), ಸಾಯಿದಾ(50) ಅಕ್ಬರ್ ಅಲಿ(40), ಮಕ್ಸೂದ್ (25) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ನಿನ್ನೆ ರಾತ್ರಿ ಟಾಟಾ ಸುಮೋದಲ್ಲಿ ನಾಗಮಂಗಲದಿಂದ ಬೆಳ್ಳೂರು ಕಡೆಗೆ ತೆರಳುತ್ತಿದ್ದ ವೇಳೆ ಬೆಂಗಳೂರಿನಿಂದ ನಾಗಮಂಗಲ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ 6ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ಳೂರು ಠಾಣಾ ಪೊಲೀಸರು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇಬ್ಬರು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.