ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ…

78
firstsuddi

ಮಂಡ್ಯ: ಹೃದಯಾಘಾತದಿಂದಾಗಿ ಕಿರುತೆರೆ ನಟ ಸಾವನ್ನಪ್ಪಿರುವ ಘಟನೆ ನಡೆದಿದೆ. ಅವರಿಗೆ 25 ವರ್ಷ ವಯಸ್ಸಾಗಿತ್ತು.

ಮೃತನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಇವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾಗಿದ್ದು, ತಂದೆ ನಾಗರಾಜು, ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು. ನಿನ್ನೆ ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಿಂದಿ, ತಮಿಳು ಕಿರುತೆರೆಯಲ್ಲಿ ಪವನ್ ನಟಿಸುತ್ತಿದ್ದರು. ಬೆಳ್ಳಿ ಪರದೆ ಮೇಲೆ ಮಿಂಚಬೇಕು ಎಂದು ಕನಸು ಕಂಡಿದ್ದರು.

ಇಂದು ಹುಟ್ಟೂರಿನಲ್ಲಿ ಮೃತ ಯುವ ನಟನ ಅಂತ್ಯಸಂಸ್ಕಾರ ನಡೆಯಲಿದೆ.