ಮಂಡ್ಯ : ಕೇಸರಿ ಶಾಲು ಧರಿಸಿದ್ದ ನೂರಾರು ವಿದ್ಯಾರ್ಥಿಗಳ ಮುಂದೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮನೆಗೆ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಶಾಸಕ ಜಿಶಾನ್ ಸಿದ್ದಿಕ್ ಭೇಟಿ ನೀಡಿ ಗಿಫ್ಟ್ ನೀಡಿದ್ದಾರೆ.
ಮಂಡ್ಯದ ಗುತ್ತಲು ಬಡಾವಣೆಯಲ್ಲಿರುವ ಮುಸ್ಕಾನ್ ನಿವಾಸಕ್ಕೆ ಭೇಟಿ ಕೊಟ್ಟ ಜೀಶನ್ ಸಿದ್ದಿಕ್ ಮುಸ್ಕಾನ್ ಗೆ ಐಫೋನ್, ಸ್ಮಾರ್ಟ್ ವಾಚ್ ಉಡುಗೊರೆ ನೀಡಿದರು. ಕುಟುಂಬಸ್ಥರಿಗೆ ಧೈರ್ಯ ಹೇಳಿ, ಅವರ ಜೊತೆ ಇರುವ ಭರವಸೆ ನೀಡಿದರು.
ಬಳಿಕ ಮಾತನಾಡಿದ ಶಾಸಕ, ಈ ಬಗ್ಗೆ ನನಗೆ ಮಾಧ್ಯಮಗಳಿಂದ ಗೊತ್ತಾಯ್ತು. ಆಗ ಬಹಳ ಗರ್ವ ಅನಿಸಿತು. ಹಿಜಾಬ್ ಹಾಕಿಕೊಳ್ಳೋದು ಅವರ ಹಕ್ಕು. ಅವರ ಹಕ್ಕಿನ ಬಗ್ಗೆ ಧೈರ್ಯದಿಂದ ದನಿ ಎತ್ತಿದ್ದಾರೆ. ಮಂಡ್ಯದಿಂದ ಇಂಡಿಯಾವರೆಗೂ ಆಕೆ ಬಗ್ಗೆ ಜನರು ಹೆಮ್ಮೆ ಪಡುತ್ತಿದ್ದಾರೆ ಎಂದು ಹೇಳಿದರು.