ಮೂಡಿಗೆರೆ : ತಾಲೂಕಿನ ಗೋಣಿಬೀಡು ಹೋಬಳಿ ದೇವರಮಕ್ಕಿ ಗ್ರಾಮದಲ್ಲಿ ಕಳೆದ 2019ರ ಮಹಾಮಳೆಗೆ ಸೇತುವೆ ಕೊಚ್ಚಿಹೋಗಿದ್ದು, ಇದುವರೆಗೂ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸದೇ ನಿಧಾನಗತಿಯಲ್ಲಿ ಕಾಮಗಾರಿ ಸಾಗುತ್ತಿದ್ದು, ಗ್ರಾಮಸ್ಥರು ಓಡಾಡಲು ಹರಸಾಹಸ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸೇತುವೆ ಕಾಮಗಾರಿ ಚುರುಕುಗೊಳಿಸುವಂತೆ ಆಗ್ರಹಿಸಿದ್ದಾರೆ.
ಈ ಕುರಿತು ನಾಗೇಶ ಗೌಡ ದೇವರಮಕ್ಕಿ ಮಾತನಾಡಿ, 2019ರ ಮಹಾಮಳೆಗೆ ಸೇತುವೆ ಕೊಚ್ಚಿಹೋಗಿದೆ. ಕಾಮಗಾರಿ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ಚುರುಕುಗೊಳಿಸುವಂತೆ ಒತ್ತಾಯಿಸಿದರು.










