ಕಲುಷಿತ ನೀರು ಸೇವಿಸಿ 6 ಮಂದಿ ಸಾವು ಪ್ರಕರಣ – ಮಕರಬ್ಬಿ ಗ್ರಾ.ಪಂ. ಪಿಡಿಓ ಅಮಾನತು…

76
firstsuddi

ವಿಜಯನಗರ : ಜಿಲ್ಲೆಯ ಹೂವಿನಹಡಗಲಿಯ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 6 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕರಬ್ಬಿ ಗ್ರಾಮ ಪಂಚಾಯಿತಿಯ ಪಿಡಿಓ ಶರಣಪ್ಪ, ಹಡಗಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಿರಿಯ ಇಂಜಿನಿಯರ್ ಜಿ.ವಿಜಯಾನಾಯ್ಕ ಅವರನ್ನು ಸೇವೆಯಿಂದ ಅಮಾನತು ಮಾಡಿ ಬಳ್ಳಾರಿ ಜಿ.ಪಂ. ಸಿಇಒ ನಂದಿನಿ ಆದೇಶ ಹೊರಡಿಸಿದ್ದಾರೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಡಿ. ಕುಮಾರ್ ಮತ್ತೋರ್ವ ಇಂಜಿನಿಯರ್ಗಳ ಅಮಾನತಿಗೆ ಶಿಫಾರಸು ಮಾಡಲಾಗಿದ್ದು, ನೋಟಿಸ್ ಜಾರಿ ಮಾಡಲಾಗಿದೆ. ಇದರ ಜೊತೆ ಡಿಹೆಚ್ಒ ಡಾ.ಜನಾರ್ಧನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಹಡಗಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಿನೋದ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಇನ್ನು ಪಿಡಿಒ ಶರಣಪ್ಪರನ್ನ ಅಮಾನತುಗೊಳಿಸಿದ್ದಕ್ಕೆ ಮಕರಬ್ಬಿ ಗ್ರಾ,ಪಂ.ಗೆ ಬೀಗ ಹಾಕಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಈ ಕೂಡಲೇ ಶರಣಪ್ಪ ಅವರ ಅಮಾನತು ಆದೇಶ ಹಿಂಪಡೆಯಲಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.