ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಎಕ್ಸ್ ಪ್ರೆಸ್ ರೈಲುಗಳು.

33

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಕೆಎಸ್‍ಆರ್ ಬೆಂಗಳೂರು ಹಾಗೂ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ನೈಋತ್ಯ ರೈಲ್ವೆ ಘೋಷಿಸಿದೆ. ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿರುವ ನೈಋತ್ಯ ರೈಲ್ವೆ, ವಿಶೇಷ ರೈಲುಗಳ ವೇಳಾಪಟ್ಟಿ, ನಿಲುಗಡೆ ಮತ್ತಿತರ ಮಾಹಿತಿಗಳನ್ನು ಹಂಚಿಕೊಂಡಿದೆ. ವಿಶೇಷ ರೈಲು ಕೆಎಸ್‍ಆರ್ ಬೆಂಗಳೂರಿನಿಂದ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‍ಗೆ ಹಾಗೂ ಅಲ್ಲಿಂದ ಕೆಎಸ್‍ಆರ್ ಬೆಂಗಳೂರಿಗೆ ಸಂಚರಿಸಲಿದೆ. ಕೆಎಸ್‍ಆರ್ ಬೆಂಗಳೂರು -ಡಾ. ಎಂಜಿಆರ್ ಚೆನ್ಸೆ ಸೆಂಟ್ರಲ್ ವಿಶೇಷ ಎಕ್ಸ್ ಪ್ರೆಸ್ ರೈಲು ಜ.10 ರಂದು ಬೆಳಿಗ್ಗೆ 08:05 ಕ್ಕೆ ಕೆಎಸ್‍ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 02:40 ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ. ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‍ನಿಂದ ರೈಲು ಜ.10 ರಂದು ಮಧ್ಯಾಹ್ನ 03:40 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಗಂಟೆಗೆ ಕೆಎಸ್‍ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.