ಮಕ್ಕಳಿಗೆ ಕೊರೊನಾ ಲಸಿಕೆ ಲಭ್ಯ – 2ರಿಂದ 18 ವರ್ಷದೊಳಗಿನವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ…

59
firstsuddi

ನವದೆಹಲಿ : 2ರಿಂದ 18 ವರ್ಷದ ಮಕ್ಕಳಿಗೆ ಭಾರತ ಬಯೋಟೆಕ್ ಕೋವ್ಯಾಕ್ಸಿನ್ ನೀಡಲು ತಜ್ಞರ ಸಮಿತಿ ಅನುಮತಿ ನೀಡಿದೆ. ಇಂದು ನಡೆದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ತುರ್ತು ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ.

ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆಯ ಪರೀಕ್ಷೆ ನಡೆದಿದ್ದು, ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿ ಡಿಸಿಜಿಐಗೆ ಸಲ್ಲಿಸಿತ್ತು. ಐಸಿಎಂಆರ್ ಮತ್ತು ಹೈದರಾಬಾದ್ ಮೂಲದ ಲಸಿಕೆ ತಯಾರಕ ಭಾರತ್ ಬಯೋಟೆಕ್ ಕೊವಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದ್ದು, ಭಾರತದ ಮೊದಲ ಸ್ಥಳೀಯ ಕೋವಿಡ್ -19 ಲಸಿಕೆ ಇದಾಗಿದೆ.

ಭಾರತ ಮೂಲದ ಜೈಡಸ್ ಕ್ಯಾಡಿಲಾ ಕಂಪನಿ ಅಭಿವೃದ್ಧಿಪಡಿಸಿರುವ ಜೈಕೊವ್-ಡಿ ಲಸಿಕೆಯ ತುರ್ತು ಬಳಕೆಗೆ ಈಗಾಗಲೇ ಅನುಮತಿ ಸಿಕ್ಕಿದೆ. 12 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಈ ಜೈಕೋವ್-ಡಿ ಲಸಿಕೆ ಬಹಳ ಪರಿಣಾಮಕಾರಿಯಾಗಲಿದೆ. ಮೂರು ಡೋಸ್ಗಳನ್ನು ಹೊಂದಿರುವ ಈ ಲಸಿಕೆಯನ್ನು ಅಕ್ಟೋಬರ್ ಬಳಿಕ 12ರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವುದು. ಮುಖ್ಯವಾಗಿ ಆರೋಗ್ಯ ಸಮಸ್ಯೆಗಳಿರುವ ಮಕ್ಕಳಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎನ್ನಲಾಗಿದೆ.

ಕೋವ್ಯಾಕ್ಸಿನ್ ಲಸಿಕೆಯನ್ನು ಮೊದಲು 12-18 ವಯೋಮಾನದವರಲ್ಲಿ, ಎರಡನೆಯದಾಗಿ 6-12 ವಯೋಮಾನ ಹಾಗೂ ಮೂರನೆಯದಾಗಿ 2-6 ವಯೋಮಾನದವರಲ್ಲಿ ಪ್ರಯೋಗ ನಡೆಸಲಾಗಿದೆ. ಈ ಪ್ರಯೋಗಗಳಲ್ಲಿ ಕೋವ್ಯಾಕ್ಸಿನ್ ವಯಸ್ಕರಂತೆಯೇ ಮಕ್ಕಳ ಮೇಲೂ ಪರಿಣಾಮ ಬೀರಲಿದೆ ಎಂದು ತಿಳಿದುಬಂದಿದೆ.