ಚಿಕ್ಕಬಳ್ಳಾಪುರ : ಮಕ್ಕಳ ನಿರ್ಲಕ್ಷ್ಯ ವರ್ತನೆಯಿಂದ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಾರೇಗೌಡ (62) ಗಂಗಮ್ಮ ( 55) ಮೃತ ದುರ್ದೈವಿಗಳು. ಮೃತ ವೃದ್ದ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಹಿರಿಯ ಮಗ ರಿಸರ್ವ್ ಪೊಲೀಸ್ ಇನ್ಸ್ ಪೆಕ್ಟರ್ ಆಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಇನ್ನೂ ಕಿರಿಯ ಮಗನ ಜೊತೆ ಮೊದಲಿಂದಲೂ ಹಾದ್ರಿಪುರ ಗ್ರಾಮದಲ್ಲಿ ಇಬ್ಬರು ವಾಸವಾಗಿದ್ದರು. ಆದರೆ ಇತ್ತೀಚೆಗೆ ಕಿರಿಯ ಮಗ ಸಹ ತಂದೆ, ತಾಯಿಯನ್ನು ಬಿಟ್ಟು ಬೇರೆ ಮನೆ ಮಾಡಿಕೊಂಡಿದ್ದನಂತೆ. ಇದೇ ವಿಚಾರಕ್ಕೆ ಮನನೊಂದು ವೃದ್ದ ದಂಪತಿ ಕಳೆದ ಭಾನುವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಬ್ಬರು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










