ಮಗನನ್ನು ಪರೀಕ್ಷೆಗೆ ಕರೆದೊಯ್ಯುವಾಗ ಅಪಘಾತ-ತಂದೆ ಸ್ಥಳದಲ್ಲೇ ಸಾವು…

238
firstsuddi

ರಾಯಚೂರು : ಮಗನನ್ನು ಪರೀಕ್ಷೆ ಬರೆಯಲು ಬೈಕ್‍ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಲದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮಿಯ್ಯಾಪುರ ಗ್ರಾಮದಲ್ಲಿ ನಡೆದಿದೆ. ನಾಗಾರೆಡ್ಡಿ(52) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಸುಕೇಶ್ವರಹಾಳ ಗ್ರಾಮದ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗಾರೆಡ್ಡಿ ಅವರು ಮಿಯ್ಯಾಪುರ ಗ್ರಾಮದಿಂದ ಗಬ್ಬೂರು ಪರೀಕ್ಷಾ ಕೇಂದ್ರಕ್ಕೆ ತಮ್ಮ ಮಗನನ್ನು ಬೈಕ್‍ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಹಸುಗಳು ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದು, ಪರಿಣಾಮ ನಾಗಾರೆಡ್ಡಿ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.