ಪ್ರಿಯತಮೆ ಮೇಲೆ ಅತ್ಯಾಚಾರವೆಸಗಿದ ಪ್ರಿಯಕರನ ತಂದೆ!

117
firstsuddi

ಚಿಕ್ಕಮಗಳೂರು : ಮಗನ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿ 10ನೇ ತರಗತಿ ಓದುತ್ತಿದ್ದು, ಪ್ರಿಯಕರನನ್ನು ಹುಡುಕಿಕೊಂಡು  ಮನೆಗೆ ಹೋಗಿದ್ದಾಳೆ. ಈ ವೇಳೆ ಆತನ ತಂದೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಹೇಳಿದ್ದಾನೆ. ಅಲ್ಲದೇ ಮನೆಯಲ್ಲೇ ಮಲಗುವಂತೆ ಹೇಳಿ ಆಕೆಯನ್ನು ಉಳಿಸಿಕೊಂಡಿದ್ದು, ಪ್ರಿಯಕರನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.