ಮಗಳನ್ನು ಕೊಂದು ಸುಟ್ಟು ಹಾಕಿದ ತಂದೆ.

31

ಕಲಬುರಗಿ: ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಸೇರಿ ಹತ್ಯೆ ಮಾಡಿದ ಘಟನೆ ಕಲಬುರಗಿ ಯಲ್ಲಿ ನಡೆದಿದೆ. ಕವಿತಾ ಕೊಳ್ಳೂರ (18)ಕೊಲೆಯಾದ ಯುವತಿ ಎಂದು ಗುರುತಿಸಲಾಗಿದ್ದು, ಆಕೆಯ ತಂದೆ ಶಂಕರ ಕೊಳ್ಳೂರ ಹಾಗೂ ಸಂಬಂಧಿಕರು ಸೇರಿ ಅನ್ಯ ಜಾತಿಯ ಯುವಕನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಹತ್ಯೆ ಮಾಡಿ ಸುಟ್ಟು ಹಾಕಿರುವ ಆರೋಪ ಕೇಳಿ ಬಂದಿದೆ. ಇಬ್ಬರು ತಲೆಮರೆಸಿಕೊಂಡಿದ್ದಾರೆ

ತಂದೆ ಶಂಕರನನ್ನು ಪೊಲೀಸರು ಬಂಧಿಸಿದ್ದು, ಅವರು ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಕವಿತಾ ಹತ್ಯೆಯಲ್ಲಿ ಮತ್ತಿಬ್ಬರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು, ವಿಧಿವಿಜ್ಞಾನ ತಂಡ ಸಾಕ್ಷ್ಯ ಸಂಗ್ರಹಿಸಿದೆ.
ಪ್ರಕರಣ ಫರಹತಾಬಾದ್ ಠಾಣೆಯಲ್ಲಿ ದಾಖಲಾಗಿದ್ದು,
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

.