ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧಾರ : ಬಿ.ಎಸ್ ಯಡಿಯೂರಪ್ಪ.

173
firstsuddi

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮಾಡಲಾಗಿದ್ದ ಪ್ರತಿಭಟನೆ ವೇಳೆ ನಡೆದ ಪೊಲೀಸರ ಗೋಲಿಬಾರ್ ಪ್ರಕರಣವನ್ನು ಸಿಐಡಿಗೆ ವಹಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳೂರು ಗೋಲಿಬಾರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವರೊಂದಿಗೆ ಚರ್ಚೆ ನಡೆಸಿ ನಿರ್ಧರಿಸಿದ್ದೇವೆ. ಇಂದು ಅಥವಾ ನಾಳೆ ಈ ಬಗ್ಗೆ ಆದೇಶ ಹೊರಡಿಸುತ್ತೇವೆ. ಈ ಬಗ್ಗೆ ತನಿಖೆ ಮಾಡಿಸುವಂತಹ ಪ್ರಯತ್ನ ಮಾಡುತ್ತೇವೆ. ಪೌರತ್ವ ತಿದ್ದುಪಡಿ ಮಸೂದೆಯಿಂದ ದೇಶದ ಮುಸಲ್ಮಾನರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರೇ ಸ್ಪಷ್ಟಪಡಿಸಿದ್ದಾರೆ. ಆದರೂ ಕೂಡಾ ಉದ್ದೇಶ ಪೂರ್ವಕವಾಗಿ ಗೋಂದ ಉಂಟುಮಾಡುವ ಷಡ್ಯಂತ್ರವನ್ನು ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದರು.