ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ ಮೊದಲಿನಂತೆಯೇ ಇರಲಿದೆ : ವಿರುಷ್ಕಾ ದಂಪತಿ.

101
firstsuddi

ಮುಂಬೈ: ವಿರಾಟ್ ಕೋಹ್ಲಿ ಅವರ ಮಗಳು ವಮಿಕಾ ಸಾರ್ವಜನಿಕವಾಗಿ ಮೊದಲ ಬಾರಿಗೆ ಕಾಣಿಸಿಕೊಂಡಿರುವ ವೀಡಿಯೋ ವೈರಲ್ ಆಗಿದ್ದು, ಈ ವಿಚಾರವಾಗಿ ವಿರುಷ್ಕಾ ದಂಪತಿ ಬೇಸರ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಏಕದಿನ ಸರಣಿಯ ಮೂರನೇ ಪಂದ್ಯದ ವೇಳೆ ಮಗಳ ಜೊತೆ ಅನುಷ್ಕಾ ಶರ್ಮಾ ಮ್ಯಾಚ್ ನೋಡುತ್ತಿರುವ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಯಿತು. ಈ ವೀಡಿಯೋದಲ್ಲಿ ಮಗಳ ವಮಿಕಾ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಳು. ಮಗಳ ವಿಚಾರವಾಗಿ ಗೌಪ್ಯತೆ ಕಾಪಾಡಿಕೊಂಡಿದ್ದ ಈ ಜೋಡಿ ಇದೀಗ ವೀಡಿಯೋ ವೈರಲ್ ಆಗಿರುವ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಎಲ್ಲರಿಗೂ ಹಾಯ್.. ನಿನ್ನೆ ಸ್ಟೇಡಿಯಂನಲ್ಲಿ ನಮ್ಮ ಮಗಳ ಪೋಟೋವನ್ನು ಸೆರೆಹಿಡಿಯಲಾಯಿತು ಮತ್ತು ಅದನ್ನು ವೈರಲ್ ಮಾಡಲಾಗಿದೆ ಎಂಬುದು ನಮಗೆ ತಿಳಿದುಬಂದಿದೆ. ನಮಗೆ ಗೊತ್ತಿಲ್ಲದಂತೆಯೇ ಅದನ್ನು ಚಿತ್ರಿಸಲಾಗಿದೆ. ನಮ್ಮನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗುತ್ತಿದೆ ಎಂಬುದು ನಮಗೆ ತಿಳಿದಿರಲಿಲ್ಲ. ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ ಮತ್ತು ಮನವಿ ಮೊದಲಿನಂತೆಯೇ ಇರಲಿದೆ. ವಮಿಕಾಳ ಫೋಟೋ ಕ್ಲಿಕ್ ಮಾಡದಿದ್ದರೆ, ಪ್ರಕಟ ಮಾಡದಿದ್ದರೆ ಅದಕ್ಕಾಗಿ ಧನ್ಯವಾದಗಳು ಎಂದು ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ತಿಳಿಸಿದ್ದಾರೆ.

ಕೊಹ್ಲಿ ಪುತ್ರಿ ವಮಿಕಾಗೆ ಜನವರಿ 11 ರಂದು 1 ವರ್ಷವಾಗಿದೆ. ಮಗಳ ಮುಖವನ್ನು ಜಗತ್ತಿಗೆ ತೋರಿಸಲು ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಇಷ್ಟ ಇಲ್ಲ. ಅದನ್ನು ಅವರು ಮಗು ಜನಿಸಿದ ಕೆಲವೇ ದಿನಗಳಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದರು. ಆದರೆ ಇದೀಗ ವಮಿಕಾ ಮೊದಲ ಬಾರಿಗೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿರುವ ವೀಡಿಯೋ ವೈರಲ್ ಆಗಿದೆ.