ಮಗುವಿಗೆ ಜನ್ಮ ನೀಡಿದ ಅರ್ಧ ಗಂಟೆಯಲ್ಲೇ ಬಾಣಂತಿ ಸಾವು…

193
firstsuddi

ರಾಮನಗರ : ಗಂಡು ಮಗುವಿಗೆ ಜನ್ಮ ನೀಡಿದ ಅರ್ಧ ಗಂಟೆಯಲ್ಲೇ ಬಾಣಂತಿ ಮೃತಪಟ್ಟಿರುವ ಘಟನೆ ಚನ್ನಪಟ್ಟಣದ ಬಾಲು ನರ್ಸಿಂಗ್ ಹೋಂನಲ್ಲಿ ನಡೆದಿದೆ. ರಶ್ಮಿ(19) ಮೃತ ಬಾಣಂತಿ. ರಶ್ಮಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡುವಾಗ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದು, ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ಹೆರಿಗೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗುವಿಗೆ ಜನ್ಮ ನೀಡಿದ ಅರ್ಧ ಗಂಟೆಯಲ್ಲಿ ಮೃತಪಟ್ಟಿದ್ದಾರೆ. ವೈದ್ಯೆ ಡಾ. ಶೈಲಜಾ ಎಂಬುವವರು ಆಪರೇಷನ್ ಥಿಯೇಟರ್‍ನಲ್ಲೇ ಶವವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚನ್ನಪಟ್ಟಣ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.