ಮಗು ಹುಟ್ಟಿದ 7 ತಿಂಗಳ ಬಳಿಕ ಮಗಳ ಮುಖ ರಿವೀಲ್ ಮಾಡಿದ ಧ್ರುವ ಸರ್ಜಾ.

57
firstsuddi

ನಟ ಧ್ರುವ ಸರ್ಜಾ ಅವರು ಮಗಳು ಹುಟ್ಟಿದ 7 ತಿಂಗಳ ಬಳಿಕ ಮೊದಲ ಬಾರಿಗೆ ಮಗಳ ಮುಖವನ್ನು ರಿವೀಲ್ ಮಾಡಿದ್ದಾರೆ. ಈ ಕುರಿತ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಧ್ರುವ ಸರ್ಜಾ ಅವರು ತಮ್ಮ ಬಾಲ್ಯದ ಗೆಳತಿ ಪ್ರೇರಣಾರನ್ನು ಪ್ರೀತಿಸಿ 2019ರಲ್ಲಿ ಮದುವೆಯಾದರು. ಕಳೆದ ವರ್ಷ ಧ್ರುವ ದಂಪತಿ ಚೊಚ್ಚಲ ಮಗುವನ್ನು ಬರಮಾಡಿಕೊಂಡರು. ಕಳೆದ 7 ತಿಂಗಳಿಂದ ಮುದ್ದಾದ ಮಗಳ ಮುಖವನ್ನು ನಟ ರಿವೀಲ್ ಮಾಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಮಗುವಿನ ಫೋಟೋ ರಿವೀಲ್ ಆಗಿದೆ.

ಮಗಳಿಗೆ ಧ್ರುವ ಹಾಗೂ ಪ್ರೇರಣಾ ದಂಪತಿ ಇನ್ನೂ ಹೆಸರಿಟ್ಟಿಲ್ಲ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ನಾನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಫೋಟೋಗಳು ಮತ್ತು ಅಪ್‌ಡೇಟ್ ಹಂಚಿಕೊಳ್ಳುತ್ತೇನೆ. ನಿಮ್ಮ ಆಶೀರ್ವಾದ ಇರಲಿ. ಜೈ ಹನುಮಾನ್ ಎಂದು ಹೇಳಿದ್ದಾರೆ.