ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ…

435
firstsuddi

ಕಲಬುರಗಿ : ಯುವಕನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ರಸ್ತೆಯ ಖರ್ಗೆ ಕಾಲೋನಿಯಲ್ಲಿ ನಡೆದಿದೆ. ಪ್ರಶಾಂತ್ ಕೊಟರಗಿ(28) ಮೃತ ಯುವಕ ಎಂದು ಗುರುತಿಸಲಾಗಿದ್ದು, ಪ್ರಶಾಂತ್ ಅವರು ಕಳೆದ ರಾತ್ರಿ ಮನೆಯವರೊಂದಿ ಜಗಳವಾಡಿಕೊಂಡು ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದು, ಈ ವೇಳೆ ಸ್ನೇಹಿತರು ಪ್ರಶಾಂತ್ ಅವರ ಬಳಿ ಯಾವುದೋ ವಿಷಯಕ್ಕೆ ಜಗಳವನ್ನು ಮಾಡಿದ್ದಾರೆ. ಜಗಳ ತಾರಕಕ್ಕೇರಿ ಅಲ್ಲೇ ಇದ್ದ ಮಚ್ಚಿನಿಂದ ಪ್ರಶಾಂತ್ ಅವರನ್ನು ಕೊಚ್ಚಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದು, ಕಲಬುರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.