ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಇಲ್ಲವಾದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಭೇಟಿ ಮಾಡುತ್ತಿದ್ದೇವೆ. ಮತಾಂತರ ದೇಶಾದ್ಯಂತ ನಡೆಯುತ್ತಿದೆ. ಇದು ಬ್ರಿಟೀಷರಿಂದ ಪ್ರಾರಂಭವಾಗಿದೆ. ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತಾರೆ ಅಂತ ಗೊತ್ತಾಗ್ತಿದ್ದಂತೆ ಪಾದ್ರಿಗಳು ಸಿಎಂ ಭೇಟಿಯಾಗಿದ್ದಾರೆ. ಇದು ಸರಿಯಲ್ಲ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಅಂತ ಆಗ್ರಹ ಮಾಡುತ್ತೇವೆ. 50ಜನ ಸ್ವಾಮೀಜಿಗಳು ಈ ಬಗ್ಗೆ ಮನವಿ ಮಾತನಾಡಲು ಬರಲಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲೇಬೇಕು ಎಂದರು.










