ಮತ್ತೆ ಚೀನಾದ 54 ಆ್ಯಪ್‍ಗಳು ನಿಷೇಧ…

68
firstsuddi

ನವದೆಹಲಿ : ದೇಶದ ಭದ್ರತೆಗೆ ಹೆಚ್ಚಿನ ಅಪಾಯವನ್ನುಂಟು ಮಾಡುವ ಚೀನಾದ 54 ಮೊಬೈಲ್ ಆ್ಯಪ್ ಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸ್ವೀಟ್ ಸೆಲ್ಫಿ ಎಚ್ ಡಿ, ಬ್ಯೂಟಿ ಕ್ಯಾಮೆರಾ – ಸೆಲ್ಫಿ ಕ್ಯಾಮೆರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್, ಕ್ಯಾಮ್ ಕಾರ್ಡ್ ಫಾರ್ ಸೇಲ್ಸ್ ಫೋರ್ಸ್ ಎಂಟ್, ಐಸೊಲ್ಯಾಂಡ್ 2: ಆಶಸ್ ಆಫ್ ಟೈಮ್ ಲೈಟ್, ವಿವಾ ವಿಡಿಯೋ ಎಡಿಟರ್, ಟೆನ್ಸೆಂಟ್ ಕ್ರೈವರ್, ಒನ್ಮಿಯೊಜಿ ಅರೆನಾ, ಆಪ್ ಮಿಯೊ ಚೆಸ್, ಡ್ಯುಯಲ್ ಸ್ಪೇಸ್ ಲೈಟ್ ಸೇರಿದಂತೆ ಒಟ್ಟು 54 ಆ್ಯಪ್ ಗಳನ್ನು ನಿಷೇಧದ ಪಟ್ಟಿಗೆ ಸೇರಿಸಲಾಗಿದೆ.

54 ಚೀನಾದ ಮೊಬೈಲ್ ಅಪ್ಲಿಕೇಶನ್ ಗಳನ್ನು ಭಾರತದಲ್ಲಿ ನಿರ್ಬಂಧಿಸುವಂತೆ ಕೇಂದ್ರ ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವಾಲಯ ಆ್ಯಪ್ ಸ್ಟೋರ್ ಮತ್ತು ಪ್ಲೇ ಸ್ಟೋರ್ ಗಳಿಗೆ ಸೂಚನೆ ನೀಡಿದೆ. ಇವು ಭಾರತೀಯರ ಮಾಹಿತಿ ರಕ್ಷಣೆ ಸರಿಯಾಗಿ ಮಾಡುತ್ತಿಲ್ಲ. ಈ ಮೂಲಕ ಭಾರತೀಯರ ಭದ್ರತೆಗೆ ಧಕ್ಕೆ ತರುತ್ತಿವೆ. ಹಾಗಾಗಿ ಕೂಡಲೇ ಈ ಎಲ್ಲ ಆ್ಯಪ್ ಗಳನ್ನೂ ಭಾರತದಲ್ಲಿ ನಿಷೇಧಿಸಲಾಗುವುದು ಎಂದು ಕೇಂದ್ರ ಇಲಾಖೆ ಹೇಳಿದೆ.

2020ರಲ್ಲಿ ಪಬ್ ಜೀ, ಟಿಕ್ ಟಾಕ್, ಶೇರ್ ಇಟ್, ಹೀರೋಸ್ ವಾರ್, ಮೇಪೈ, ಏರ್ ಬ್ರಷ್, ವಿ ಚಾಟ್, ಹೆಲೋ, ಲೈಕೀ, ಯುಸಿ ನ್ಯೂಸ್, ಸ್ನ್ಯಾಕ್ ವಿಡಿಯೋ, ಅಲಿ ಎಕ್ಸ್ ಪ್ರೆಸ್, ಅಲಿ ಪೇ ಕ್ಯಾಷಿಯರ್ ಸೇರಿ ಒಟ್ಟು 118 ಆ್ಯಪ್ ಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿತ್ತು. 2020ರ ಜುಲೈನಿಂದ ಸೆಪ್ಟೆಂಬರ್ ವರೆಗೆ ಹಂತಹಂತವಾಗಿ ಚೀನಾದ ಹಲವು ಮೊಬೈಲ್ ಅಪ್ಲಿಕೇಶನ್ ಗಳನ್ನು ತೆಗೆದುಹಾಕಲಾಗಿದೆ.