ಮತ್ತೆ ದಂಡ ಅಸ್ತ್ರ ; ಮಾಸ್ಕ್ ಹಾಕದಿದ್ರೆ 250 ರೂ. ಫೈನ್ ಕಟ್ಟಲು ಸಿದ್ಧರಾಗಿ…

47
firstsuddi

ಬೆಂಗಳೂರು : ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಓಡಾಡುವವರ ವಿರುದ್ಧ ದಂಡದ ಅಸ್ತ್ರ ಪ್ರಯೋಗಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಈಗಾಗಲೇ ಈ ಸಂಬಂಧ ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಅವರಿಗೆ ಪ್ರಸ್ತಾವನೆ ಕಳುಹಿಸಿದ್ದು, ಬಿಬಿಎಂಪಿ ಮತ್ತು ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ನಿಯಮ ಜಾರಿಗೆ ತರುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಈಗಾಗಲೇ ಬೆಂಗಳೂರಿನಲ್ಲಿ ಕೊರೊನಾ ಕೇಸ್ ಒಂದು ಸಾವಿರ ಗಡಿ ದಾಟಿದೆ. ಅಲ್ಲದೇ ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಕೂಡ ಶೇ.5 ದಾಟಿದೆ.