ಮತ್ತೆ ಬೆಲೆ ಏರಿಕೆ ಶಾಕ್! ಬಸ್ ಆಯ್ತು, ಈಗ ಮೆಟ್ರೋ ಪ್ರಯಾಣ ದರ ಏರಿಕೆ.

13

ಬೆಂಗಳೂರು: ಬಸ್ ಬೆಲೆ ಏರಿಕೆ ಬೆನ್ನಲ್ಲೇ ನಮ್ಮ ಮೆಟ್ರೋ ಬೆಲೆಯೂ ಹೆಚ್ಚಳವಾಗಲಿದೆ. ಇಂದು ನಡೆದ ಸಭೆಯಲ್ಲಿ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ ಲಿಮಿಟೆಡ್ ಬೆಲೆ ಹೆಚ್ಚಳಕ್ಕೆ ಅಸ್ತು ಎಂದಿದೆ. ಮೆಟ್ರೋ ಬೆಲೆ ಪರಿಷ್ಕರಣೆ ಪ್ರಕ್ರಿಯೆ ಈ ಸಂಬಂಧ ಬಿಎಂಆರ್‍ಸಿಎಲ್ ಅಧಿಕಾರಿಗಳು ಮತ್ತು ದರ ಏರಿಕೆ ಸಮಿತಿಯ ಸದಸ್ಯರ ಜೊತೆ ಹೈವೊಲ್ಟೇಜ್ ಸಭೆ ಇಂದು ನಡೆಯಿತು. ಸಭೆಯಲ್ಲಿ ಬೆಲೆ ಹೆಚ್ಚಳ, ಜೊತೆಗೆ ಪರಿಷ್ಕøತ ಬೆಲೆ ನಿಗದಿ ದಿನಾಂಕ ಕೂಡ ಫೈನಲ್ ಮಾಡಲಾಗಿದೆ. ನಾಳೆ ಮಾಧ್ಯಮಗೋಷ್ಠಿ ನಡೆಸಿ ಅಧಿಕೃತವಾಗಿ ಬಿಎಂಆರ್‍ಸಿಎಲ್ ಬೆಲೆ ಏರಿಕೆ ವಿವರವಾದ ಮಾಹಿತಿಯನ್ನು ಪ್ರಕಟಿಸಲಿದೆ. ಕಳೆದ ಎಂಟು ವರ್ಷದಿಂದ ಮೆಟ್ರೋ ಪ್ರಯಾಣ ಬೆಲೆ ಹೆಚ್ಚಳ ಆಗಿರಲಿಲ್ಲ. ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ಸಿಂಗಾಪುರ, ಹಾಂಕಾಂಗ್, ದೆಹಲಿಗೆ ತೆರಳಿ ಅಲ್ಲಿನ ಮೆಟ್ರೋ ಬೆಲೆ ಪರಿಷ್ಕರಣೆ ಕ್ರಮ, ಬೆಲೆ ಏರಿಕೆಯನ್ನು ಅಧ್ಯಯನ ಮಾಡಿ ಬೆಲೆ ಪರಿಷ್ಕರಣೆ ವರದಿ ಸಿದ್ಧಪಡಿಸಿದೆ. 2017 ರಲ್ಲಿ 10% -15%ರಷ್ಟು ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ರೈಲು ಮುಂದಿನ 5 ವರ್ಷದಲ್ಲಿ 220 ಕಿಲೋಮೀಟರ್ ನಷ್ಟು ವಿಸ್ತರಣೆಯಾಗಲಿದೆ. ಮೆಟ್ರೋ ಕಾಮಗಾರಿಗಾಗಿ ವಿವಿಧ ಬ್ಯಾಂಕ್, ಏಜೆನ್ಸಿಗಳಿಗೆ ಪಾವತಿಸಬೇಕಾದ ಸಾಲದ ಮೇಲಿನ ಬಡ್ಡಿ, ಪ್ರಸ್ತುತ ರೈಲುಗಳ ಕಾರ್ಯಾಚರಣೆ ವೆಚ್ಚ, ನಿರ್ವಹಣೆ ಮತ್ತು ಸಿಬ್ಬಂದಿ ವೇತನ ಮತ್ತಿತರ ವಿವಿಧ ವೆಚ್ಚ ಪ್ರತಿ ವರ್ಷ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಶೇಕಡ 15 ರಿಂದ 20% ರಷ್ಟು ಬೆಲೆ ಹೆಚ್ಚಳ ಅನಿವಾರ್ಯ ಎಂಬುದಾಗಿ ಅಧಿಕಾರಿಗಳು ವರದಿ ನೀಡಿದ್ದರು.