ಮದುವೆಯಾಗದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು…

120
firstsuddi

ದಾವಣಗೆರೆ : ಮದುವೆಯಾಗದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮದಲ್ಲಿ ನಡೆದಿದೆ. ವೀರೇಶ್(32) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ವೀರೇಶ್ ಅವರು ಮದುವೆಗಾಗಿ ತುಂಬಾ ಹುಡುಗಿ ನೋಡಿದರೂ ಹುಡುಗಿ ಸಿಗದ ಹಿನ್ನೆಲೆ, ತನಗೆ ಮದುವೆಯಾಗುತ್ತಿಲ್ಲ ಎಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.