ಮದುವೆಯಾಗುವುದಾಗಿ ನಂಬಿಸಿ ನರ್ಸ್ ಮೇಲೆ ಅತ್ಯಾಚಾರ : ವೈದ್ಯನ ವಿರುದ್ಧ ದೂರು ದಾಖಲು…

113
firstsuddi

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ನರ್ಸ್ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವೈದ್ಯನ ವಿರುದ್ಧ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.

23 ವರ್ಷದ ಯುವತಿಯು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿದ್ದು, ಈಕೆಗೆ ಮಂಗಳೂರಿನ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಫೈನಲ್ ಡಿಗ್ರಿ ಓದುತ್ತಿದ್ದ ಕೇರಳ ಮೂಲದ ದಂತ ವೈದ್ಯನ ಪರಿಚಯವಾಗಿತ್ತು ಎಂದು ಹೇಳಲಾಗಿದೆ. ಆತ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದು, ಗರ್ಭವತಿಯಾದಾಗ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ವಂಚನೆಗೊಳಗಾದ ನರ್ಸ್ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಆರೋಪಿ ವೈದ್ಯನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.