ಮದುವೆ ಸಮಾರಂಭ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ – ಐವರು ದುರ್ಮರಣ…

74
firstsuddi

ಭುವನೇಶ್ವರ : ಕಾರು, ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಒಡಿಶಾದ ಸೋನಾಪುರ ಜಿಲ್ಲೆಯ ಮಹಾನದಿ ಸೇತುವೆ ಮೇಲೆ ನಡೆದಿದೆ.

ಸೋನಾಪುರ ಜಿಲ್ಲೆಯ ಉಲ್ಲುಂದಾ ಬ್ಲಾಕ್ ನ ನಿಮ್ನಾ ಗ್ರಾಮದ 10 ಜನರು ಕೌದಿಯಾಮುಂಡ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದಾಗ ತಡರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸೋನಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬುರ್ಲಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.