ಮಧುರೈ ರೈಲು ನಿಲ್ದಾಣದ ಸ್ಥಾಯಿ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತ- 10 ಮಂದಿ ಸಾವು…

78
firstsuddi

ಚೆನ್ನೈ: ತಮಿಳುನಾಡಿನ ಮಧುರೈ ರೈಲು ನಿಲ್ದಾಣದ ಸ್ಥಾಯಿ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಮುಂಜಾನೆ 5:15ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಅರ್ಧ ಗಂಟೆಯ ನಂತರ ಬೆಂಕಿಯನ್ನು ನಂದಿಸಿದ್ದಾರೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಬೋರ್ಡ್‌ನಲ್ಲಿದ್ದ ಅಕ್ರಮ ಗ್ಯಾಸ್ ಸಿಲಿಂಡರ್ ಬೆಂಕಿಗೆ ಕಾರಣವಾಯಿತು ಎಂದು ದಕ್ಷಿಣ ರೈಲ್ವೆ ಹೇಳಿದೆ. ಸಾವನ್ನಪ್ಪಿದ 10 ಮಂದಿ ಕೂಡ ಉತ್ತರ ಪ್ರದೇಶದವರು ಎಂದು ತಿಳಿದುಬಂದಿದೆ. ಮೃತದೇಹಗಳನ್ನು ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಧುರೈ ಜಿಲ್ಲಾಧಿಕಾರಿ ಎಂ.ಎಸ್.ಸಂಗೀತಾ ಅವರು ಠಾಣೆಗೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ 20 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಗ್ನಿ ದುರಂತ ಘಟನೆಗೆ ದಕ್ಷಿಣ ರೈಲ್ವೆ ಇಲಾಖೆ ಪ್ರತಿಕ್ರಿಯಿಸಿದ್ದು, ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದೆ.