ಬೆಳಗಾವಿ : ಮರಕ್ಕೆ ಕಟ್ಟಿಹಾಕಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ ಪರಿಣಾಮ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬಸವನಕುಡಚಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ನಿವಾಸಿ ವಿಶಾಲ ಕಲ್ಲಪ್ಪಾ ಪಟಾಯಿ (28) ಸಾವನ್ನಪ್ಪಿದ ವ್ಯಕ್ತಿ. ಕಳೆದ ನಾಲ್ಕು ದಿನಗಳ ಹಿಂದೆ ಮಾನಸಿಕ ಅಸ್ವಸ್ಥನಂತೆ ಗ್ರಾಮಗಳಲ್ಲಿ ಓಡಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದನಂತೆ. ಅಲ್ಲದೇ, ನಾಲ್ಕು ದಿನಗಳ ಹಿಂದೆ ಕಲ್ಲಿನಿಂದ ಸುಮಾರು 9 ಶಿಕ್ಷಕರ ಮೇಲೆ ಹಲ್ಲೆ ಮಾಡಿದ್ದನಂತೆ.
ಗಾಯಗೊಂಡಿದ್ದ ಶಿಕ್ಷಕರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಇದೇ ದಿನ ಸಾಯಂಕಾಲ ಗ್ರಾಮದ ಕೆಲ ಜನ ಸೇರಿಕೊಂಡು ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿದ್ದಾರೆ. ಬಳಿಕ ಆತನನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










