ಮರಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ…

142
firstsuddi

ರಾಯಚೂರು : ಮರಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಕುಮಾರ್ ನಾಯಕ್(21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಕುಮಾರ್ ನಾಯಕ್ ಲೋಯೋಲಾ ಪದವಿ ಕಾಲೇಜಿನಲ್ಲಿ ಬಿಕಾಂ ಎರಡನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದ್ದು, ಹಾಜರಾತಿ ಕಡಿಮೆ ಇರುವುದರಿಂದ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನೀಡದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ಕುಮಾರ್ ನಾಯಕ್ ಅವರ ಪೋಷಕರು ಆರೋಪಿಸಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯಾ ಪೊಲೀಸರು ಆಗಮಿಸಿ ಪರೀಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.