ದಾವಣಗೆರೆ : ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಶಾಲಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಮರಿಗೊಂಡನಹಳ್ಳಿಯಲ್ಲಿ ನಡೆದಿದೆ. ದಿವ್ಯಾ ಪಾಟೀಲ್(13) ಮೃತ ಬಾಲಕಿ ಎಂದು ಗುರುತಿಸಲಾಗಿದ್ದು, ಬಾಲಕಿ ಇಂದು ಮುಂಜಾನೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಮರಳು ಲಾರಿ ಬಾಲಕಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಲಾರಿಗಡ ಬೆಂಕಿ ಹಾಕಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ನ್ಯಾಮತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.










