ನವದೆಹಲಿ : ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ದೆಹಲಿಯ ಕೃಷಿ ಭವನದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಮಳೆಯಿಂದಾಗುತ್ತಿರುವ ತೊಂದರೆಗಳು, ಪ್ರಕೃತಿ ವಿಕೋಪಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜೊತೆಗೆ ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಜನರ ಕಷ್ಟ ನಷ್ಟಗಳಿಗೆ ನೆರವು ನೀಡುವ ಸಂದರ್ಭ ಒದಗಿ ಬಂದರೆ ತಕ್ಷಣವೇ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.










