ಚಾಮರಾಜನಗರ : ಮಲೆ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2.33 ಕೋಟಿ ರೂ. ಸಂಗ್ರಹವಾಗಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಿನ್ನೆ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಕೇವಲ 47 ದಿನಗಳಲ್ಲಿ 2,33,57,288 ಕೋಟಿ ರೂ. ಸಂಗ್ರಹವಾಗಿದೆ.
122 ದಿನಗಳ ಬಳಿಕ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಇದರಲ್ಲಿ ಕೊರೊನಾ ಲಾಕ್ ಡೌನ್ ಪರಿಣಾಮ 75 ದಿನಗಳ ಕಾಲ ದೇವಾಲಯ ಬಂದ್ ಮಾಡಲಾಗಿತ್ತು. ಇದೀಗ ಕೇವಲ47 ದಿನಗಳಲ್ಲಿ ಕೋಟಿಗಟ್ಟಲೆ ಹಣ ಸಂಗ್ರಹವಾಗಿರುವುದು ವಿಶೇಷ. ಜೊತೆಗೆ ಹುಂಡಿಯಲ್ಲಿ 155 ಗ್ರಾಂ ಚಿನ್ನ, 2.2 ಕೆಜಿ ಬೆಳ್ಳಿ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ದಾಸೋಹ ವ್ಯವಸ್ಥೆ ಪ್ರಾರಂಭವಾಗಲಿದೆ.










