ಉಡುಪಿ: ಮಲ್ಪೆ ಮೂಲದ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ.
ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ ವಿರಾಜ್ ಮೆಂಡನ್ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದರು.
ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










