ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಶಿವಮೊಗ್ಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಇನ್ನೆರಡು ದಿನಗಳ ಕಾಲ ಹೀಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಜಿಲ್ಲೆಯಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಿಸಿದ್ದಾರೆ.
ಇನ್ನೂ ಮೈಸೂರಿನಲ್ಲೂ ಕೂಡ ಮಳೆಯ ಆರ್ಭಟ ಹಿನ್ನೆಲೆ ಶಾಲೆಗಳಿಗೆ ಇಂದು ಒಂದು ದಿನದ ಮಟ್ಟಿಗೆ ಷರತ್ತು ಬದ್ಧ ರಜೆಯನ್ನು ಮೈಸೂರಿನ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಘೋಷಿಸಿದ್ದಾರೆ. ಆದರೆ ಮುಂದಿನ ರಜಾದಿನಗಳಲ್ಲಿ ಒಂದು ದಿನ ಕಾರ್ಯ ನಿರ್ವಹಿಸಲು ಸೂಚಸಿದ್ದಾರೆ.










