ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ, ಆದರೆ ದೇವಿ ದರ್ಶನ ಮಾಡಲು ಸಮಯವಿಲ್ಲ: ಸಿದ್ದು ವಿರುದ್ಧ ಬಿಜೆಪಿ ಕಿಡಿ

37
firstsuddi

ಬೆಂಗಳೂರು: ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಪ್ರಕಟಿಸಿ ಸಿದ್ದರಾಮಯ್ಯನವರು ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ. ಆದರೆ ದೇವಿ ದರ್ಶನ ಮಾಡಲು ಸಮಯವಿಲ್ಲ ಎಂದು ಹೇಳಿ ತರಾಟೆಗೆ ತೆಗೆದುಕೊಂಡಿದೆ.

ಬಿಜೆಪಿ ಪೋಸ್ಟ್‌ನಲ್ಲಿ ಏನಿದೆ?
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು.

ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ.

ಸಿಎಂ ಸಿದ್ದರಾಮಯ್ಯನವರೇ ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ?

ವೀಡಿಯೋದಲ್ಲಿ ಏನಿದೆ?
ಸಿದ್ದರಾಮಯ್ಯ ಮತ್ತು ಎಂಬಿ ಪಾಟೀಲ್ ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿ ದೇವಸ್ಥಾನಕ್ಕೆ ಬಂದಿರುತ್ತಾರೆ. ದೇವಸ್ಥಾನದ ಒಳಗಡೆ ಎಂಬಿ ಪಾಟೀಲ್ ಹೋದ ಬಳಿಕ ಅವರು ಮುಖ್ಯಮಂತ್ರಿಗಳನ್ನು ಒಳಗೆ ಬನ್ನಿ ಎಂದು ಕರೆಯುತ್ತಾರೆ. ಇದಕ್ಕೆ ಸಿಎಂ ಬರಲ್ಲ ಎಂದು ಹೇಳುತ್ತಾರೆ. ಈ ವೇಳೆ ಎಂಬಿ ಪಾಟೀಲ್ ಕೈ ಮುಗಿದು ಬನ್ನಿ ಬನ್ನಿ ಎಂದು ಮನವಿ ಮಾಡುತ್ತಾರೆ. ಇದಕ್ಕೆ ಸಿದ್ದರಮಯ್ಯ ಕೈ ಸನ್ನೆಯ ಮೂಲಕ ನಾನು ಬರುವುದಿಲ್ಲ ಎಂದು ಹೇಳುತ್ತಾರೆ.